ಬೆಂಗಳೂರು [ಮೇ 15] :  ಕರ್ನಾಟಕ ಚುನಾವಣಾ ಫಲಿತಾಂಶ ಸದ್ಯದ ಅಂಕಿ ಅಂಶಗಳ ಪ್ರಕಾರವಾಗಿ ಬಿಜೆಪಿ ಮುನ್ನಡೆ ಕಾಯ್ದುಕೊಂಡು 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ತಮ್ಮ ಪಕ್ಷ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮಲ್ಲೇಶ್ವರ ಕ್ಷೇತ್ರದಿಂದ ವಿಜಯಿಯಾಗಿರುವ ಅಶ್ವತ್ಥ್ ನಾರಾಯಣ್ ಹೆಚ್ಚಿನ ಪ್ರಮಾಣದಲ್ಲಿ ಸ್ಥಾನಗಳನ್ನು ಪಡೆದು ಕೊಳ್ಳುತ್ತೇವೆ. ಅಲ್ಲದೇ ಕರ್ನಾಟಕ ಜನತೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ಈಗಾಗಲೇ ತಿರಸ್ಕರಿಸಿದ್ದಾರೆ.  ನಮ್ಮ ನಾಯಕ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇನ್ನು ಕಾಂಗ್ರೆಸ್ ನ  9 ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ.  ಜೆಡಿಎಸ್ ನಲ್ಲಿ ಮೂವರು ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ.