ರಾಜಭವನದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. 

ಬೆಂಗಳೂರು (ಮೇ 17 ): ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಮಾಡುವ ಹಿನ್ನೆಲೆಯಲ್ಲಿ , ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ರಾಜಭವನದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ನೂತನ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಹಿನ್ನೆಲೆಯಲ್ಲಿ , ರಾಜಭವನದ ಸುತ್ತ ಮುತ್ತ ಪೊಲೀಸರಿಂದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಅಲ್ಲದೇ ಯಡಿಯೂರಪ್ಪ ಪ್ರಮಾಣ ವಚನಕ್ಕೆ ವಿಪಕ್ಷಗಳಿಂದ ವಿರೋಧ ಇರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಮೇಲೆಯೂ ಕೂಡ ನಿಗಾ ವಹಿಸಲಾಗಿದೆ. ಪ್ರತಿಭಟನಾಕಾರರನ್ನ ನಿಯಂತ್ರಿಸಲು ನಗರದಾದ್ಯಂತ 6 ಸಾವಿರ ಸಿಬ್ಬಂದಿ ನೇಮಕ ಮಾಡಲಾಗಿದೆ.