ವರುಣಾದಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ: ಯಡಿಯೂರಪ್ಪ ಘೋಷಣೆ

karnataka-assembly-election-2018 | Monday, April 23rd, 2018
Sayed Isthiyakh
Highlights
 • ಭಾರೀ ಕುತೂಹಲ ಕೆರಳಿಸಿದ್ದ ವರುಣಾ; ಸಾಮನ್ಯ ಕಾರ್ಯಕರ್ತನಿಗೆ ಟಿಕೆಟ್
 • ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಕಾಂಗ್ರೆಸ್ ಅಭ್ಯರ್ಥಿ

ಮೈಸೂರು: ಭಾರೀ ಕುತೂಹಲ ಕೆರಳಿಸಿದ್ದ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿದ್ದ ಯಾಡಿಯೂರಪ್ಪ ಪುತ್ರ ವಿಜಯೇಂದ್ರ ಕಣದಿಂದ ಹಿಂದೆ ಸರಿದಿದ್ದಾರೆ.

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸುವುದಿಲ್ಲವೆಂದು ಯಡಿಯೂರಪ್ಪ ಖಚಿತ ಪಡಿಸಿದ್ದಾರೆ. ವರುಣಾದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಗೆಲುವು ಸಾಧಿಸುವುದಾಗಿ ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ಗೊಂದಲದ ಗೂಡಾಗಿದ್ದ ವರುಣಾದಲ್ಲಿ ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆ ಕ್ಷಣದ ಬದಲಾವಣೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.  

ಯಡಿಯೂರಪ್ಪ ಈ ಬಗ್ಗೆ ಘೋಷಿಸುತ್ತಿದ್ದಂತೆ ಕಾರ್ಯಕರ್ತರೆಲ್ಲಾ ರೊಚ್ಚಿಗೆದ್ದಿದ್ದಾರೆ. ಕಛೇರಿಯಲ್ಲಿದ್ದ ಕುರ್ಚಿ, ಪೀಠೋಪಕರಣಗಳನ್ನು ಎಸೆದು ಗಲಾಟೆ ನಡೆಸಿದ್ದಾರೆ.

ವರುಣಾದಲ್ಲಿ ಕಾಂಗ್ರೆಸ್ನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುತ್ತಿದ್ದಾರೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Sayed Isthiyakh