ಬಿಎಸ್ ವೈ ಒಂದು ದಿನದ ಸಿಎಂ : ಕಾಂಗ್ರೆಸ್ ಆಕ್ರೋಶ

First Published 18, May 2018, 10:44 AM IST
BSY one-day CM Says Congress Leaders
Highlights

 ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 
 

ನವದೆಹಲಿ (ಮೇ 18): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಯಡಿಯೂರಪ್ಪ ಅವರು ಒಂದು ದಿನದ ಮಟ್ಟಿಗೆ ಮಾತ್ರ ಮುಖ್ಯಮಂತ್ರಿಯಾಗಿರಲಿ ದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ವ್ಯಂಗ್ಯವಾಡಿದ್ದಾರೆ. 

ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್‌ವೈಗೆ ಆಹ್ವಾನ ನೀಡಿ ಎರಡು ಬಾರಿ ಸಂವಿಧಾನದ ಮೇಲೆ ಎನ್ ಕೌಂಟರ್ ಮಾಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

loader