Asianet Suvarna News Asianet Suvarna News

ವಿಶ್ವಾಸಮತ ಮುನ್ನವೆ ಬಿಎಸ್'ವೈ ರಾಜೀನಾಮೆ

ಮೇ.15ರಂದು ಪ್ರಕಟಗೊಂಡ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ ಮಿತ್ರ ಪಕ್ಷ 38 ಹಾಗೂ ಪಕ್ಷೇತರರು 2 ಸ್ಥಾನದಲ್ಲಿ ಜಯಗಳಿಸಿದ್ದರು. ಯಾವ ಪಕ್ಷಕ್ಕೂ ಬಹುಮತ ಬಾರದ ಕಾರಣ ರಾಜ್ಯಪಾಲರು ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿ ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದರು. 

BSY resign  CM Post

ಬೆಂಗಳೂರು(ಮೇ.19): ವಿಶ್ವಾಸಮತ ಮುನ್ನವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. 
ವಿಧಾನಸೌಧದಲ್ಲಿ 222 ಶಾಸಕರು ಭಾಷಣ ಮಾಡಿದ ನಂತರ ವಿಶ್ವಸಮತ ಪ್ರಾಸ್ತವನೆ ಮಾಡಿದ ಯಡಿಯೂರಪ್ಪ ಅವರು ತಮ್ಮ ರಾಜೀನಾಮೆ ಘೋಷಿಸಿದರು.  ಜಾತ್ಯಾತೀತ ಜನತಾದಳಕ್ಕೆ ಕಾಂಗ್ರೆಸ್ ಪಕ್ಷ ಬೇಷರತ್ ಬೆಂಬಲ ಘೋಷಿಸಿದ್ದ ಕಾರಣ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಪಟ್ಟ ಅಲಂಕರಿಸುವುದು ಖಚಿತವಾಗಿದೆ.
ಮೇ.15ರಂದು ಪ್ರಕಟಗೊಂಡ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ ಮಿತ್ರ ಪಕ್ಷ 38 ಹಾಗೂ ಪಕ್ಷೇತರರು 2 ಸ್ಥಾನದಲ್ಲಿ ಜಯಗಳಿಸಿದ್ದರು. ಯಾವ ಪಕ್ಷಕ್ಕೂ ಬಹುಮತ ಬಾರದ ಕಾರಣ ರಾಜ್ಯಪಾಲರು ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿ ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದರು. 
ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿದ್ದಕ್ಕೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಕೋರ್ಟ್ ಮೆಟ್ಟಿಲೇರಿದ್ದರು.  ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಒಂದು ದಿನದಲ್ಲಿ  ವಿಶ್ವಾಸಮತ ಸಾಬೀತಿಗೆ ಆದೇಶ ನೀಡಿದ್ದರು.

Follow Us:
Download App:
  • android
  • ios