ಬಿ.ಎಸ್.ವೈ ನಿರ್ಧಾರದ ಹಿಂದೆ ಪ್ರಧಾನಿ ಮೋದಿ

BSY Resignation : Modi behind these game
Highlights

 ಬಹುಮತಕ್ಕೆ ಅಗತ್ಯ ವಿರುವಷ್ಟು ಶಾಸಕರ ಸಂಖ್ಯಾ ಬಲವನ್ನು ಹೊಂದಿಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಮುಖ್ಯ ಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಬೇಕು ಎಂಬ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯ ಬಿಜೆಪಿ ನಾಯಕರು ಮತ್ತು ಪಕ್ಷದ ಹಿರಿಯ ನಾಯಕರಿಗೆ ನೀಡಿದ್ದರು ಎಂಬ ಮಾಹಿತಿ ಹೊರ ಬಿದ್ದಿದೆ. 

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಉಳಿಸಿಕೊಳ್ಳಲು ಅಗತ್ಯವಿರುವ ಶಾಸಕರ ಬೆಂಬಲ ಪಡೆಯು ವುದು ಸರಿಯಾದ ನಿರ್ಧಾರವೇ.

ಆದರೆ, ಬಹುಮತಕ್ಕೆ ಅಗತ್ಯ ವಿರುವಷ್ಟು ಶಾಸಕರ ಸಂಖ್ಯಾ ಬಲವನ್ನು ಹೊಂದಿಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ, ಮುಖ್ಯ ಮಂತ್ರಿ ಸ್ಥಾನಕ್ಕೆ ವಿನಯಪೂರ್ವಕವಾಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಬೇಕು ಎಂಬ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯ ಬಿಜೆಪಿ ನಾಯಕರು ಮತ್ತು ಪಕ್ಷದ ಹಿರಿಯ ನಾಯಕರಿಗೆ ನೀಡಿದ್ದರು ಎಂಬ ಮಾಹಿತಿ ಹೊರ ಬಿದ್ದಿದೆ. 

ಬಹುಮತ ಸಾಬೀತಿಗೆ ಶನಿವಾರ ನಿಗದಿಯಾಗಿದ್ದ ಒಂದು ಗಂಟೆ ಮುಂಚಿತವಾಗಿ, ಬಹುಮತ ಸಾಬೀತುಪಡಿಸಲು ವಿಫಲವಾಗುತ್ತೀರಿ ಎಂದಾದರೆ, ಇಂಥ ಕೆಲಸಕ್ಕೆ ಕೈ ಹಾಕಬೇಡಿ. ಶಾಸಕರನ್ನು ಬಲವಂತವಾಗಿ ಮತ್ತು ಅಕ್ರಮವಾಗಿ ಹಿಡಿದಿಟ್ಟುಕೊಳ್ಳುವುದು ಸಮಂಜಸ ಮಾರ್ಗವಲ್ಲ ಎಂಬ ಸಂದೇಶವನ್ನು ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಮುಖಂಡರಿಗೆ ಬಿಜೆಪಿಯ ರಾಷ್ಟ್ರೀಯ ಮುಖಂಡರು ರವಾನಿಸಿದ್ದರು ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

loader