ದಿನೇಶ್ ಗುಂಡೂರಾವ್ ವಿರುದ್ಧ ದೂರು ದಾಖಲು

First Published 7, May 2018, 8:06 AM IST
Complaint Against Dinesh Gundurao
Highlights

ಚುನಾವಣಾ ಆಯೋಗದ ಅನುಮತಿ ಇಲ್ಲದೆ ಕರಪತ್ರ ಹಂಚುತ್ತಿದ್ದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಅವರ ಬೆಂಬಲಿಗರ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ದಾಖಲಾಗಿದೆ.

ಬೆಂಗಳೂರು: ಚುನಾವಣಾ ಆಯೋಗದ ಅನುಮತಿ ಇಲ್ಲದೆ ಕರಪತ್ರ ಹಂಚುತ್ತಿದ್ದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಅವರ ಬೆಂಬಲಿಗರ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ದಾಖಲಾಗಿದೆ. 

ದಿನೇಶ್ ಗುಂಡೂರಾವ್ ಅವರು ಏ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಆಶಾ ಫುಡ್ ಕ್ಯಾಂಪ್ ನಿಂದ ಮಲ್ಲೇಶ್ವರ 7ನೇ ಕ್ರಾಸ್‌ವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ವೇಳೆ ಮತಯಾಚಿಸಲು ಭಿತ್ತಿ ಪತ್ರ ಗಳನ್ನು ಹಂಚುತ್ತಿದ್ದರು. ಆದರೆ, ಕರಪತ್ರ ಹಂಚಲು ಚುನಾ ವಣಾ ಆಯೋಗದಿಂದ ಅನುಮತಿ ಪಡೆಯದೆ ಚುನಾವ ಣಾ ನೀತಿ ಸಂಹಿತೆಯನ್ನು ಉಲ್ಲಂಘಸಿದ್ದಾರೆ ಎಂದು ಆರೋಪಿಸಿ ಫ್ಲೈಯಿಂಗ್ ಸ್ಕ್ವಾಡ್ ಕೆ.ಎ.ಶಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದರು. 

ದೂರು ಸ್ವೀಕರಿ ಸಿದ ಮಲ್ಲೇಶ್ವರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಮೇ ೩ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

loader