ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಸೇರಿ 15ಕ್ಕೂ ಹೆಚ್ಚು ಜನರ ವಿರುದ್ಧ ಚಿಕ್ಕಮಗಳೂರು ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.

ಚಿಕ್ಕಮಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಕಟ್ಟುನಿಟ್ಟಿನಲ್ಲಿ ಚುನಾವಣಾ ನೀತಿ ಸಂಹಿತೆಯನ್ನೂ ಜಾರಿ ಮಾಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಬಹು ಭಾಷಾ ನಟ ಪ್ರಕಾಶ್ ರೈ ಸೇರಿ 15ಕ್ಕೂ ಹೆಚ್ಚು ಜನರ ವಿರುದ್ಧ ಚಿಕ್ಕಮಗಳೂರು ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.

ನಗರದಲ್ಲಿ ಮೇ 3ರಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಹಾಗೂ ಹೋರಾಟ ಗೀತೆ ಸಾಂಸ್ಕೃತಿಕ ಕಾರ್ಯ ಕ್ರಮವನ್ನು ನಡೆಸಲು ಅನುಮತಿ ನೀಡುವಂತೆ ಸಹಾಯಕ ಚುನಾವಣಾಧಿಕಾರಿಗಳಿಗೆ ಕೋರಲಾಗಿತ್ತು.

ಆದರೆ, ಜಿಲ್ಲಾ ಚುನಾ ವಣಾಧಿಕಾರಿಗಳಿಂದ ಅನುಮತಿ ಪಡೆಯು ವಂತೆ ಸಹಾಯಕ ಚುನಾವಣಾಧಿ ಕಾರಿಗಳು ಹೇಳಿದ್ದರೂ, ಅನುಮತಿ ಇಲ್ಲದೆ, ಅಂಡೇ ಛತ್ರದ ರಸ್ತೆಯಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು.