ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವಿನ ಜಗಳದಿಂದಾಗಿ 2 ದಿನಗಳಿಂದ ಕುಷ್ಟಗಿ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನೀರೇ ಇಲ್ಲ! ಶಾಸಕ ದೊಡ್ಡನಗೌಡ ಪಾಟೀಲ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. 

ಕೊಪ್ಪಳ (ಏ. 29): ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವಿನ ಜಗಳದಿಂದಾಗಿ 2 ದಿನಗಳಿಂದ ಕುಷ್ಟಗಿ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನೀರೇ ಇಲ್ಲ! ಶಾಸಕ ದೊಡ್ಡನಗೌಡ ಪಾಟೀಲ್ ಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೊಚ್ಚಿಗೆದ್ದ ಗ್ರಾಮ ಪಂಚಾಯತ್ ಕಾಂಗ್ರೆಸ್ ಸದಸ್ಯರು ಗ್ರಾಮಕ್ಕೆ ನೀರು ಕಟ್ ಮಾಡಿದ್ದಾರೆ. ಕಾಂಗ್ರೆಸ್- ಬಿಜೆಪಿ ಇಬ್ಬರ ನಡುವಿನ ಗಲಾಟೆಯಿಂದ ಗ್ರಾಮಕ್ಕೆ ನೀರನ್ನು ಕಡಿತಗೊಳಿಸಲಾಗಿದ್ದು ನೀರಿಗಾಗಿ 2 ದಿನಗಳಿಂದ ತುಮರಿಕೊಪ್ಪ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಎರಡು ಪಕ್ಷಗಳ‌ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ‌ ಹನುಮಸಾಗರ ಪೊಲೀಸರು ಭೇಟಿ ನೀಡಿದ್ದಾರೆ.