ರಾಷ್ಟ್ರಕ್ಕೆ ರಾಜ್ಯದಿಂದ ತಲ್ಲಣ:ಸರ್ಕಾರಕ್ಕಾಗಿ ಹಲವು ರಾಜ್ಯಗಳ ಮನವಿ

Congress fights for power in Goa. Senior leaders of the Party to meet the Goa governor
Highlights

ಗೋವಾದಲ್ಲಿ ಕಡಿಮೆ ಶಾಸಕರನ್ನು ಹೊಂದಿದ್ದ ಬಿಜೆಪಿ ಇತರ ಪಕ್ಷಗಳ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿ ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಇಲ್ಲಿ  ಹೆಚ್ಚು ಸ್ಥಾನ ಜಯಗಳಿಸಿತ್ತು. ನಾಳೆ ಎಲ್ಲ 17 ಕಾಂಗ್ರೆಸ್ ಶಾಸಕರು ಗೋವಾ ರಾಜಭವನದಲ್ಲಿ ಪರೇಡ್ ನಡೆಸಲು ತೀರ್ಮಾನಿಸಿದ್ದಾರೆ.

ನವದೆಹಲಿ(ಮೇ.17): ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರ ರಚನೆಯ ಸರ್ಕಸ್ ರಾಷ್ಟ್ರ ರಾಜಕಾರಣಕ್ಕೆ ಶಿಫ್ಟ್ ಆಗುವ ಎಲ್ಲ ಲಕ್ಷಣ ಗೋಚರಿಸುತ್ತಿದೆ. ಅತೀ ಹೆಚ್ಚು ಶಾಸಕರನ್ನು ಹೊಂದಿರುವ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನೀಡಿದ್ದು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇತ್ತ ಗೋವಾ, ಬಿಹಾರ ಹಾಗೂ ಮೇಘಾಲಯ ಕಾಂಗ್ರೆಸ್ ಪಕ್ಷಗಳು ತಮಗೂ ಸರ್ಕಾರ ರಚಿಸಲು ಅವಕಾಶ ನೀಡುವಂತೆ ರಾಜ್ಯಪಾಲರನ್ನು ಮನವಿ ಮಾಡುವ ಸಾಧ್ಯತೆಯಿದೆ. ಗೋವಾದಲ್ಲಿ ಕಡಿಮೆ ಶಾಸಕರನ್ನು ಹೊಂದಿದ್ದ ಬಿಜೆಪಿ ಇತರ ಪಕ್ಷಗಳ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿ ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಇಲ್ಲಿ  ಹೆಚ್ಚು ಸ್ಥಾನ ಜಯಗಳಿಸಿತ್ತು. ನಾಳೆ ಎಲ್ಲ 17 ಕಾಂಗ್ರೆಸ್ ಶಾಸಕರು ಗೋವಾ ರಾಜಭವನದಲ್ಲಿ ಪರೇಡ್ ನಡೆಸಲು ತೀರ್ಮಾನಿಸಿದ್ದಾರೆ.
ಬಿಹಾರದಲ್ಲಿ ಆರ್'ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಕರ್ನಾಟಕ ರಾಜ್ಯ ರಾಜಕಾರಣವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದಾರೆ. ನಾವು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಅವಕಾಶ ಕೇಳುತ್ತೇನೆ ಎಂದಿದ್ದಾರೆ. ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿತ್ತು. ಆದರೆ ಬಿಜೆಪಿ ಹಾಗೂ ಜೆಡಿಯು ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಮೇಘಾಲಯದಲ್ಲೂ ಸರ್ಕಾರ ರಚಿಸುವಂತೆ ವಿರೋಧಿ ಕಾಂಗ್ರೆಸ್ ಪಕ್ಷ ರಾಜ್ಯಪಾಲರನ್ನು ಒತ್ತಾಯಿಸುವ ಸಾಧ್ಯತೆಯಿದೆ.

 

loader