ಬೆಂಗಳೂರಿನ ಹೋಟೆಲ್'ನಲ್ಲಿ ಆನಂದ್ ಸಿಂಗ್, ಪ್ರತಾಪ್ ಗೌಡ

First Published 19, May 2018, 1:58 PM IST
Congress Missing MLAs  at Bengaluru Hotel
Highlights

ಯಾವ ಪಕ್ಷಕ್ಕೂ ಬಹುಮತದ ಸ್ಥಾನ ಬಾರದಿರುವ ಕಾರಣ ಹೆಚ್ಚು ಸ್ಥಾನ ಗಳಿಸಿದ ಬಿಜೆಪಿಯನ್ನು ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿ ಬಹುಮತ ಸಾಬೀತಿಗೆ  15 ದಿನ ಕಾಲಾವಕಾಶ ನೀಡಿದ್ದರು. ಈ ಹಿನ್ನಲೆಯಲ್ಲಿ 2 ದಿನಗಳ ಹಿಂದಷ್ಟೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 

ಬೆಂಗಳೂರು(ಮೇ.19): ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ರಾಯಚೂರಿನ ಮಸ್ಕಿ ಶಾಸಕ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಗೋಲ್ಡ್ ಫಿಂಚ್ ಹೋಟೆಲ್'ನಲ್ಲಿ ಪತ್ತೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಹೋಟೆಲ್'ನ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಧ್ಯಾಹ್ನದ ನಂತರ ವಿಧಾನಸೌಧಕ್ಕೆ ಆಗಮಿಸುವ ಸಾಧ್ಯತೆಯಿದೆ.
ಯಾವ ಪಕ್ಷಕ್ಕೂ ಬಹುಮತದ ಸ್ಥಾನ ಬಾರದಿರುವ ಕಾರಣ ಹೆಚ್ಚು ಸ್ಥಾನ ಗಳಿಸಿದ ಬಿಜೆಪಿಯನ್ನು ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿ ಬಹುಮತ ಸಾಬೀತಿಗೆ  15 ದಿನ ಕಾಲಾವಕಾಶ ನೀಡಿದ್ದರು. ಈ ಹಿನ್ನಲೆಯಲ್ಲಿ 2 ದಿನಗಳ ಹಿಂದಷ್ಟೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 
ಕಾಂಗ್ರೆಸ್ - ಜೆಡಿಎಸ್ ಪಕ್ಷ  15 ದಿನ ಕಾಲಾವಕಾಶ ನೀಡಿದ್ದಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಕೇವಲ ಒಂದು ದಿನದಲ್ಲಿ ಬಹುಮತ ಸಾಬೀತುಪಡಿಸುವಂತೆ ಕೋರ್ಟ್ ಆದೇಶಿಸಿತ್ತು. ಇಂದು ಸಂಜೆ 4 ಗಂಟೆಗೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ತೀರ್ಪು ಸದನದಲ್ಲಿ ಹೊರಬೀಳಲಿದೆ. 

loader