ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲರು ಸರಕಾರ ರಚಿಸಲು ಆಹ್ನಾನಿಸುವ ಸಾಧ್ಯತೆ ಇದ್ದು, ಮೊದಲಿನಿಂದಲೂ ಹೇಳುತ್ತಿರುವಂತೆ ಬಿಜೆಪಿ ಶಾಸಕಾಂಗ ಪಕ್ಷದ ಮುಖಂಡ ಬಿ.ಎಸ್.ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬಹುದು.

ಇವರು ಕರುನಾಡ ನೂತನ ಶಾಸಕರು

ಬಿಜೆಪಿ ಪ್ರಚಾರ ಸಭೆಯುದ್ದಕ್ಕೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಮೇ 17ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳುತ್ತಲೇ ಇದ್ದರು. ಇದೀಗ ಸರಕಾರ ರಚಿಸಲು ಅಗತ್ಯವಾದ ಮ್ಯಾಜಿಕ್ ನಂಬರ್ ತಲುಪಲು ವಿಫಲವಾದರೂ, ಬಿಜೆಪಿ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ರಾಜ್ಯಪಾಲರಿಗೆ ಸರಕಾರ ರಚಿಸಲು ಅವಕಾಶ ನೀಡುವಂತೆ ಕೋರಿತ್ತು.

ಈ ಎಲ್ಲ ರಾಜಕೀಯ ಬೆಳವಣಿಗೆ ನಡುವೆಯೇ ಅತೀ ಕಡಿಮೆ ಸ್ಥಾನಗಳನ್ನು ಪಡೆದ ಜಿಡಿಎಸ್‌ಗೆ ಭೇಷರತ್ತು ಬೆಂಬಲ ನೀಡುವುದಾಗಿ ಎರಡನೇ ಸ್ಥಾನ ಪಡೆದ ಕಾಂಗ್ರೆಸ್ ಘೋಷಿಸಿದ್ದು, ರಾಜ್ಯ ರಾಜಕೀಯ ರೋಚಕ ತಿರುವು ಪಡೆದಿತ್ತು. ಈ ಎಲ್ಲ ಬೆಳವಣಿಗೆಯಿಂದ ಆಪರೇಷನ್ ಹಸ್ತ ಹಾಗೂ ಆಪರೇಷನ್ ಕಮಲದ ಚಟುವಟಿಕೆಗಳೂ ನಡೆಯುತ್ತಿದ್ದು, ರೆಸಾರ್ಟ್ ರಾಜಕಾರಣವೂ ರಾಜ್ಯದಲ್ಲಿ ಆರಂಭವಾಗಿದೆ.

ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಬಿಜೆಪಿ ರಾಜ್ಯಪಾಲರು ಸರಕಾರ ರಚಿಸಲು ಆಹ್ವಾನಿಸಿದ್ದರೂ, ಬಹುಮತ ಸಾಬೀತುಪಡಿಸುವುದು ಸುಲಭವಲ್ಲ. ಇದಕ್ಕೆ ಬಿಜೆಪಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುವುದು ಮತ್ತಷ್ಟು ಕುತೂಹಲ ಸೃಷ್ಟಿಸಿದೆ.

ಸಿದ್ದರಾಮಯ್ಯ ಅಭ್ಯರ್ಥಿ

ಮೇ 27ರೊಳಗೆ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ವಾಜುಬಾಯಿ ವಾಲಾ ಬಿಜೆಪಿಗೆ ಸೂಚಿಸಿದೆ.

ಈ ಖಾತೆ ನಿರ್ವಹಿಸೋರು ಸೋಲುವುದು ಗ್ಯಾರಂಟಿ