Asianet Suvarna News Asianet Suvarna News

ಹೆಚ್ಡಿಕೆ ರಾಜ್ಯದ 25ನೇ ಸಿಎಂ : ಮೇ.21ರಂದು ಪ್ರಮಾಣ ವಚನ

ಮೇ.15ರಂದು ಪ್ರಕಟಗೊಂಡ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ ಮಿತ್ರ ಪಕ್ಷ 38 ಹಾಗೂ ಪಕ್ಷೇತರರು 2 ಸ್ಥಾನದಲ್ಲಿ ಜಯಗಳಿಸಿದ್ದರು.

HD Kumaraswamy Karnataka's 25th CM Taking oath  May 21st

ಬೆಂಗಳೂರು(ಮೇ.19): ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಮೇ.21ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
ವಿಶ್ವಾಸಮತ ಸಾಬೀತುಪಡಿಸದೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಕಾರಣ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈ ಮೊದಲು ಕುಮಾರಸ್ವಾಮಿ 2006ರಲ್ಲಿ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. 
ಮೇ.15ರಂದು ಪ್ರಕಟಗೊಂಡ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ ಮಿತ್ರ ಪಕ್ಷ 38 ಹಾಗೂ ಪಕ್ಷೇತರರು 2 ಸ್ಥಾನದಲ್ಲಿ ಜಯಗಳಿಸಿದ್ದರು. ಯಾವ ಪಕ್ಷಕ್ಕೂ ಬಹುಮತ ಬಾರದ ಕಾರಣ ರಾಜ್ಯಪಾಲರು ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಿ ಬಹುಮತ ಸಾಬೀತಿಗೆ 15 ದಿನ ಅವಕಾಶ ನೀಡಿದ್ದರು. 
ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿದ್ದಕ್ಕೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಕೋರ್ಟ್ ಮೆಟ್ಟಿಲೇರಿದ್ದರು.  ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಒಂದು ದಿನದಲ್ಲಿ  ವಿಶ್ವಾಸಮತ ಸಾಬೀತಿಗೆ ಆದೇಶ ನೀಡಿದ್ದರು.   

 

Follow Us:
Download App:
  • android
  • ios