ಅಂಬರೀಶ್ - ಎಚ್ ಡಿಕೆ ದಿಢೀರ್ ಭೇಟಿ

HD Kumaraswamy Meet Ambarish
Highlights

 ಜೆಡಿಎಸ್ ನಾಯಕ ಎಚ್.ಡಿ ಕುಮಾರ ಸ್ವಾಮಿ , ತಡರಾತ್ರಿ ಕಾಂಗ್ರೆಸ್ ಮುಖಂಡ ಅಂಬರೀಶ್ ಮನೆಗೆ ದಿಢೀರ್ ಭೇಟಿ ನೀಡಿದ್ದಾರೆ. ಗಾಲ್ಫ್ ಕ್ಲಬ್ ಬಳಿ ಇರುವ ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿ, ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.  

ಬೆಂಗಳೂರು : ಜೆಡಿಎಸ್ ನಾಯಕ ಎಚ್.ಡಿ ಕುಮಾರ ಸ್ವಾಮಿ , ತಡರಾತ್ರಿ ಕಾಂಗ್ರೆಸ್ ಮುಖಂಡ ಅಂಬರೀಶ್ ಮನೆಗೆ ದಿಢೀರ್ ಭೇಟಿ ನೀಡಿದ್ದಾರೆ. ಗಾಲ್ಫ್ ಕ್ಲಬ್ ಬಳಿ ಇರುವ ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿ, ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.  

ಈ ವೇಳೆ ಅಂಬರೀಶ್ ಅವರು ಜೆಡಿಎಸ್ ಗೆ ಬೆಂಬಲ ನೀಡುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಆದರೆ ಈ ಬಗ್ಗೆ ಅಂಬರೀಶ್ ಯಾವುದೇ ವಿಚಾರವನ್ನೂ ಕೂಡ ಸ್ಪಷ್ಟವಾಗಿ ತಿಳಿಸಿಲ್ಲ. ಇನ್ನು ಜೆಡಿಎಸ್ ಸೇರುತ್ತಾರಾ ಎನ್ನುವ ಪ್ರಶ್ನೆಗಳೂ ಮೂಡಿದ್ದು, ಈ ವೇಳೆ ಜೆಡಿಎಸ್ ಸೇರ್ಪಡೆ ಬಗ್ಗೆ ಅವರು ವಿಚಾರವನ್ನೂ ಕೂಡ ಹೇಳಿಲ್ಲ. 

ಆದರೆ ಕಾಂಗ್ರೆಸ್ ನಲ್ಲಿ ತಮಗೆ ಅವಮಾನ ಮಾಡಿದ್ದಾರೆ. ಸಚಿವ ಸ್ಥಾನದಿಂದ ಹೇಳದೇ ಕೇಳದೆ ತೆಗೆದಿದ್ದಾರೆ. ಅದೇ ಕಾರಣಕ್ಕೆ ತಾವು ಚುನಾವಣೆಗೆ ಸ್ಪರ್ಧಿಸಿಲ್ಲ ಎಂದು ಎಚ್ ಡಿಕೆ ಮುಂದೆ ನೋವು ತೋಡಿಕೊಂಡಿದ್ದಾರೆ ಎನ್ನಲಾಗಿದೆ.  
ಅಲ್ಲದೇ  ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳುವೆ ಎಂದು ಕೂಡ ಎಚ್.ಡಿಕೆಗೆ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

loader