ಯಾವುದೇ ಕಾರಣಕ್ಕೂ ಬೇರೆ ಪಕ್ಷದತ್ತ ಮುಖ ಮಾಡುವುದಿಲ್ಲ ಎಂದು ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು : ಯಾವುದೇ ಕಾರಣಕ್ಕೂ ಬೇರೆ ಪಕ್ಷದತ್ತ ಮುಖ ಮಾಡುವುದಿಲ್ಲ ಎಂದು ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ‘ದಿನಕರ್ ಶೆಟ್ಟಿ ಅವರಿಗೆ ಜೆಡಿಎಸ್ ಗಾಳ ಹಾಕಿದೆ. 

Add Asianetnews Kannada as a Preferred SourcegooglePreferred

ಹಿಂದೆ ಜೆಡಿಎಸ್‌ನಲ್ಲಿದ್ದ ದಿನಕರ್ ಶೆಟ್ಟಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ’ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿರುವ ಬಗ್ಗೆ ‘ಕನ್ನಡಪ್ರಭ’ದೊಂದಿಗೆ ಮಾತನಾಡಿ ಬೇಸರ ವ್ಯಕ್ತಪಡಿಸಿರುವ ಅವರು, ಈ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ನಾನು ಬೆಂಗಳೂರಿನಲ್ಲಿ ಪಕ್ಷದ ಸಭೆಗಳನ್ನು ಮುಗಿಸಿಕೊಂಡು ಅರವಿಂದ ಲಿಂಬಾವಳಿ ಅವರ ಸೂಚನೆ ಮೇರೆಗೆ ಕುಮಟಾಕ್ಕೆ ಬಂದೆ.

ಆಯಾಸಗೊಂಡಿದ್ದರಿಂದ ಮಲಗಿ ಏಳುವಷ್ಟರಲ್ಲಿ ಈ ಸುದ್ದಿಯ ಬಗ್ಗೆ ದೂರವಾಣಿ ಕರೆಗಳು ಬರಲಾರಂಭಿಸಿತು. ಯಾಕೆ ಹೀಗಾಗುತ್ತಿದೆ ಎಂದು ಅರ್ಥವಾಗಲಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ಇಷ್ಟೊಂದು ಮತಗಳ ಅಂತರದಿಂದ ಗೆದ್ದಿರುವ ನಾನು ಪಕ್ಷದ ಮುಖಂಡರು, ಕ್ಷೇತ್ರದ ಮತದಾರರಿಗೆ ಮೋಸ ಮಾಡುವುದಿಲ್ಲ. 

ಈ ಕುರಿತು ಪಕ್ಷದ ಮುಖಂಡರಾದ ಶೋಭಾ ಕರಂದ್ಲಾಜೆ ಅವರಿಗೂ ಕರೆ ಮಾಡಿ ಸ್ಪಷ್ಟನೆ ನೀಡಿದ್ದೇನೆ ಎಂದರು. ದಿನಕರ ಶೆಟ್ಟಿ ಅವರು ಕುಮಟಾ ಕ್ಷೇತ್ರದಿಂದ 2008 ರಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು.