ಮೊದಲ ಬಾರಿ ಇಂದಿರಾ ಕ್ಯಾಂಟೀನ್ ಗೆ ರಜೆ

First Published 12, May 2018, 8:30 AM IST
Indira Canteen Leave Today
Highlights

ಚುನಾವಣೆ ಹಿನ್ನೆಲೆಯಲ್ಲಿ ನಗರದ 198 ವಾರ್ಡುಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕಳೆದ ಆಗಸ್ಟ್ 16 ರಿಂದ ನಗರದಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌ಗೆ  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇಂದು ರಜೆ ನೀಡಲಾಗಿದೆ.
 

ಬೆಂಗಳೂರು :  ಚುನಾವಣೆ ಹಿನ್ನೆಲೆಯಲ್ಲಿ ನಗರದ 198 ವಾರ್ಡುಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕಳೆದ ಆಗಸ್ಟ್ 16 ರಿಂದ ನಗರದಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌ಗೆ  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇಂದು ರಜೆ ನೀಡಲಾಗಿದೆ.

ಕ್ಯಾಂಟೀನ್ ಸಿಬ್ಬಂದಿಗೆ ಮತ ಚಲಾಯಿಸಲು ಅವಕಾಶ ನೀಡುವ ಉದ್ದೇಶದಿಂದ ಬಿಬಿಎಂಪಿ ಈ ತೀರ್ಮಾನ ತೆಗೆದುಕೊಂಡಿದೆ. ಪ್ರತಿದಿನ 4 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಆಹಾರ ನೀಡುತ್ತಿದೆ. ಇಂದಿರಾ ಕ್ಯಾಂಟೀನ್‌ನ 1 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ ಅಡುಗೆ ಮನೆ ಮತ್ತು ಕ್ಯಾಂಟೀನ್‌ಗಳಲ್ಲಿ ಪ್ರತಿದಿನ ಕಾರ್ಯನಿರ್ವಹಿಸುತ್ತಿದ್ದಾರೆ.

ಮತದಾನ ನಡೆಯುವ ದಿನವಾದ ಇಂದು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕ ಇಲಾಖೆ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಆದೇಶ ರಾಜ್ಯದ ಎಲ್ಲ ಬಗೆಯ ಸಂಸ್ಥೆ, ಉದ್ಯಮಗಳಿಗೂ ಅನ್ವಯವಾಗಲಿದೆ. ಹೀಗಾಗಿ ಇಂದು ಎಲ್ಲ ಇಂದಿರಾ ಕ್ಯಾಂಟೀನ್, ಸಂಚಾರಿ ಕ್ಯಾಂಟೀನ್ ಹಾಗೂ ಅಡುಗೆ ಮನೆಗಳನ್ನು ಸ್ಥಗಿತಗೊಳಿಸಲಾಗಿದೆ.

loader