ಚುನಾವಣೆ ಹೊಸ್ತಿಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್ ನೀಡಿದೆ. ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ವೇಳೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿರುವ ಅಯ್ಯಪ್ಪನಗರದಲ್ಲಿರುವ ಭೀಮಣ್ಣ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ.
ಕಾರವಾರ: ಚುನಾವಣೆ ಹೊಸ್ತಿಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್ ನೀಡಿದೆ. ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ವೇಳೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿರುವ ಅಯ್ಯಪ್ಪನಗರದಲ್ಲಿರುವ ಭೀಮಣ್ಣ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸುಮಾರು ಐದು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಭೀಮಣ್ಣ ಅವರು ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಕುಟುಂಬದ ಸಂಬಂಧಿಕರು.
2008ರಲ್ಲಿ ಶಿರಸಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಭೀಮಣ್ಣ ಅವರು ಶಿರಸಿಯಲ್ಲಿ ಕೆಲ ಬಾರ್‌ಗಳನ್ನು ಹೊಂದಿದ್ದಾರೆ. ಇವರಿಗೆ 20 ಎಕರೆ ಅಡಕೆ ತೋಟವೂ ಇದೆ. ಐಟಿ ದಾಳಿ ವೇಳೆ ಭೀಮಣ್ಣ ನಾಯ್ಕ್ ಅವರು ಸಿದ್ದಾಪುರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದರು.
