ಅಭ್ಯರ್ಥಿ ನಿಧನ : ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ

First Published 4, May 2018, 7:30 AM IST
Jayanagar constituency election postponed
Highlights

ಜಯನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣೆಯಲ್ಲಿ ಮುಂದೂಡಲಾಗಿದೆ. ಉಳಿದ ಕ್ಷೇತ್ರಗಳ ಚುನಾವಣೆ ನಿಗದಿತ ದಿನಾಂಕದಲ್ಲಿಯೇ ನಡೆಯಲಿದೆ.

ಬೆಂಗಳೂರು : ಜಯನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣೆಯಲ್ಲಿ ಮುಂದೂಡಲಾಗಿದೆ. 

ಒಂದು ಕ್ಷೇತ್ರದ ಚುನಾವಣೆ ಮಾತ್ರ ಮುಂದೂಡಿಕೆ ಮಾಡಲಾಗಿದೆ. ಅಭ್ಯರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಉಳಿದಂತೆ ಇತರೆ ಕ್ಷೇತ್ರದ ಚುನಾವಣೆಯು ನಿಗದಿಯಂತೆ ಮೇ 12 ರಂದೇ ನಡೆಯಲಿದೆ.

ನಿನ್ನೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ವಿಜಯ್ ಕುಮಾರ್ ಅವರು ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಚಿಕಿತ್ಸೆ ಫಲಕಾರಿಯದೇ ರಾತ್ರಿ 1 ಗಂಟೆ ಸುಮಾರಿಗೆ ವಿಜಯ್ ಕುಮಾರ್ ವಿಧಿವಶರಾಗಿದ್ದರು. 

loader