Asianet Suvarna News Asianet Suvarna News

ಜಗ್ಗೇಶ್‌ ಟೀವಿ ಶೋ ವಿರುದ್ಧ ಜೆಡಿಎಸ್‌ ದೂರು

ವಿಧಾನಸಭೆ ಚುನಾವಣೆ ಕಣಕ್ಕೆ ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಕಿಲಾಡಿಗಳು ಸೀಸನ್‌ 2 ಕಾರ್ಯಕ್ರಮವನ್ನು ಸ್ಥಗಿತಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು ನೀಡಿದೆ. 

JDS Complaint Aginst Jaggesh TV

ಬೆಂಗಳೂರು :  ವಿಧಾನಸಭೆ ಚುನಾವಣೆ ಕಣಕ್ಕೆ ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಕಿಲಾಡಿಗಳು ಸೀಸನ್‌ 2 ಕಾರ್ಯಕ್ರಮವನ್ನು ಸ್ಥಗಿತಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು ನೀಡಿದೆ. 
ಜೆಡಿಎಸ್‌ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಆಯೋಗಕ್ಕೆ ದೂರು ನೀಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9.10ಕ್ಕೆ ಕಾಮಿಡಿ ಕಿಲಾಡಿಗಳು ಸೀಸನ್‌ 2 ಕಾರ್ಯಕ್ರಮ ಪ್ರಸಾರವಾಗುತ್ತಿದೆ. 
ಇದರಲ್ಲಿ ನಟ ಜಗ್ಗೇಶ್‌ ಕಾರ್ಯಕ್ರಮದ ಜಡ್ಜ್‌ ಆಗಿದ್ದಾರೆ. ಚುನಾವಣೆಗೆ ಸ್ಪರ್ಧಿಸಿರುವ ನಟರ ಯಾವುದೇ ಕಾರ್ಯಕ್ರಮ, ಸಿನಿಮಾಗಳನ್ನು ಬಿತ್ತರ ಮಾಡುವಂತಿಲ್ಲ ಎಂದು ಆಯೋಗವು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದರಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Follow Us:
Download App:
  • android
  • ios