ಸರ್ಕಾರ ರಚನೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನಗರದಲ್ಲಿ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜೆಡಿಎಸ್-ಕಾಂಗ್ರೆಸ್ ಒಪ್ಪಂದ ಮಾಡಿಕೊಳ್ಳುವ ಕುರಿತು ಯೋಚನೆ ಮಾಡಿವೆ.
ಬೆಂಗಳೂರು : ಸರ್ಕಾರ ರಚನೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನಗರದಲ್ಲಿ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜೆಡಿಎಸ್-ಕಾಂಗ್ರೆಸ್ ಒಪ್ಪಂದ ಮಾಡಿಕೊಳ್ಳುವ ಕುರಿತು ಯೋಚನೆ ಮಾಡಿವೆ.
ಈಗಾಗಲೇ 104 ಸಂಖ್ಯಾಬಲ ಇರುವ ಬಿಜೆಪಿ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ ಸಂಖ್ಯಾಬಲ ಹೆಚ್ಚಳವಾಗಲಿದೆ. ಹೀಗಾಗಿ ಸಂಖ್ಯಾಬಲ ಹೆಚ್ಚಳಕ್ಕೆ ಕಡಿವಾಣ ಹಾಕಲು ಹೊಂದಾಣಿಕೆ ತಂತ್ರ ಅನು ಸರಿಸಲು ಮುಂದಾಗಿದೆ ಎಂದು ಹೇಳಲಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾರರ ಚೀಟಿ ಪತ್ತೆ ಪ್ರಕರಣದಿಂದಾಗಿ ಚುನಾವಣಾ ಆಯೋಗವು ಮತದಾನ ರದ್ದುಗೊಳಿಸಿ ಮೇ 28ಕ್ಕೆ ನಿಗದಿಗೊಳಿಸಿದೆ. ಶಾಸಕ ವಿಜಯಕುಮಾರ್ ನಿಧನದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಿ ಜೂ.11ಕ್ಕೆ ನಿಗದಿಗೊಳಿಸಲಾಗಿದೆ.
ಜಯನಗರ ವಿಧಾನ ಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಕುರಿತು ಪರಸ್ಪರ ಒಪ್ಪಂದಕ್ಕೆ ಸಜ್ಜಾಗುತ್ತಿವೆ ಎಂದು ತಿಳಿದು ಬಂದಿದೆ. ರಾಜ ರಾಜೇಶ್ವರಿ ನಗರ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಿಂದ ಕಾಂಗ್ರೆಸ್‌ಗೆ ತೀವ್ರ ಮುಜುಗರವನ್ನುಂಟು ಮಾಡಿದೆ.
ಕಾಂಗ್ರೆಸ್ ವರಿಷ್ಠರು ಘಟನೆಯನ್ನು ಸಮರ್ಥಿಸಿಕೊಂಡಿ ದ್ದಾರಾದರೂ ಮೈತ್ರಿ ಸರ್ಕಾರ ರಚನೆಯಾಗುತ್ತಿರುವ ಕಾರಣ ಘಟನೆಯನ್ನು ಬಿಜೆಪಿ ಲಾಭ ಪಡೆದುಕೊಳ್ಳುವ ಸಾಧ್ಯತೆ ಇದೆ. ಘಟನೆಯಿಂದಾಗಿ ಕಾಂಗ್ರೆಸ್ ಅಭ್ಯರ್ಥಿಯಾ ಗಿರುವ ಮುನಿರತ್ನ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ಇಲ್ಲದ ಕಾರಣ ಕಾಂಗ್ರೆಸ್ ಸಹ ಮುನಿರತ್ನಗೆ ಬೆಂಬಲಿಸಲು ಹಿಂದೇಟು ಹಾಕಿದೆ.
