ಆರ್‌.ಆರ್. ನಗರ, ಜಯನಗರದಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲ ಫೈನಲ್ ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಮೈತ್ರಿ ಧರ್ಮ ಪಾಲಿಸಲು ಕೈ-ತೆನೆ ಪಕ್ಷಗಳು ಆರಂಭಿಸಿದೆಯಾ ಎಂಬ ಪ್ರಶ್ನೆ ಉದ್ಭವವಾಗಿದೆ.  ಮುಂಬರುವ ಆರ್.ಆರ್.ನಗರ ಹಾಗೂ ಜಯನಗರ ಕ್ಷೇತ್ರಗಳಲ್ಲಿ, ಜೆಡಿಎಸ್ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ಹೇಳಲಾಗುತ್ತಿದೆ. ಅದರ ಬದಲಿಗೆ ಕಾಂಗ್ರೆಸ್ ವಿಧಾನ ಪರಿಷತ್ತು ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಡಲಿದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. 

Comments 0
Add Comment