ಇಂದು ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

First Published 5, May 2018, 8:35 AM IST
JDS Manifesto Release Today
Highlights

ಬಡವರ, ಶ್ರಮಿಕರ, ರೈತರ ಪರವಾದ ಜೆಡಿಎಸ್ ಪ್ರಣಾಳಿಕೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. 

ತುಮಕೂರು: ಬಡವರ, ಶ್ರಮಿಕರ, ರೈತರ ಪರವಾದ ಜೆಡಿಎಸ್ ಪ್ರಣಾಳಿಕೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. 

ಅವರು ಕುಣಿಗಲ್ ತಾಲೂಕು ಸಂತೆಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  

ಜೆಡಿಎಸ್‌ನ ಪ್ರಣಾಳಿಕೆ ಬಿಡುಗಡೆ ಆದ ಬಳಿಕ ಬೇರೆ ಪಕ್ಷದ ಪ್ರಣಾಳಿಕೆಯೊಂದಿಗೆ ಹೋಲಿಕೆ ಮಾಡಿ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಏಳಿಗೆಗೆ ಪ್ರಣಾಳಿಕೆಯಲ್ಲಿ ಒತ್ತು ಕೊಟ್ಟಿಲ್ಲ. ನಮ್ಮ ಪ್ರಣಾಳಿಕೆ ನೋಡಿದ ಮೇಲೆ ಜೆಡಿಎಸ್‌ನ ಗುರಿ ಏನೆಂಬುದು ಎರಡು ರಾಷ್ಟ್ರೀಯ ಪಕ್ಷಗಳಿಗೆ ತಿಳಿಯುತ್ತದೆ ಎಂದರು.

loader