ರಾಜ್ಯ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಜೆಡಿಎಸ್ ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಜೆಡಿಎಸ್ ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣ್ಯ ನೇತೃತ್ವದಲ್ಲಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಈಗಾಗಲೇ ಪಕ್ಷವು ಘೋಷಣೆ ಮಾಡಿರುವಂತೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯದ ರೈತರ ಎಲ್ಲಾ ರೀತಿಯ ಸಾಲ ಮನ್ನಾ ತೀರ್ಮಾನವು ಪ್ರಣಾಳಿಕೆಯ ಪ್ರಮುಖ ಅಂಶವಾಗಲಿವೆ.
ಕುಮಾರಸ್ವಾಮಿ ಅವರು ವಿವಿಧ ಕ್ಷೇತ್ರಗಳ ಜನರೊಂದಿಗೆ ನಡೆಸಿರುವ ಸಂವಾದಗಳಲ್ಲಿ ಪಡೆದ ಮಾಹಿತಿಗಳನ್ನು ಸಹ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಗ್ರಾಮೀಣ ಭಾಗಕ್ಕೆ 24 ಗಂಟೆಯೂ ಮೂರು ಫೇಸ್ ವಿದ್ಯುತ್ ಪೂರೆಕೆ, ಬಿಪಿಎಲ್ ಕುಟುಂಬಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ, ಕಾರ್ಮಿಕರಿಗೆ ಪ್ರೋತ್ಸಾಹ ಧನ ಸೇರಿದಂತೆ ಇತರೆ ಅಂಶಗಳನ್ನು ಪ್ರಣಾಳಿಕೆ ಹೊಂದಿರಲಿದೆ ಎಂದು ತಿಳಿದು ಬಂದಿದೆ.
