Asianet Suvarna News Asianet Suvarna News

ಡಿ.ಕೆ. ಶಿವಕುಮಾರ್ - ಎಂ.ಬಿ. ಪಾಟೀಲ್ ಗೆ ಸಚಿವ ಸ್ಥಾನ ಕಷ್ಟ

ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ನಾಯಕತ್ವ ಹಿಂದೇಟು ಹಾಕಿದ್ದು, ಈ ಇಬ್ಬರೂ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡಲು ತಮಗೆ ಮನಸ್ಸಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ಪಾಳೆಯಕ್ಕೆ ರವಾನಿಸಿದೆ ಎನ್ನಲಾಗಿದೆ.

JDS Oppose To Give Minister Post To MB Patil And DK Shivakumar

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ನಾಯಕತ್ವ ಹಿಂದೇಟು ಹಾಕಿದ್ದು, ಈ ಇಬ್ಬರೂ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡಲು ತಮಗೆ ಮನಸ್ಸಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ಪಾಳೆಯಕ್ಕೆ ರವಾನಿಸಿದೆ ಎನ್ನಲಾಗಿದೆ.

ಇದರಿಂದ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್ ಇವರಿಬ್ಬರನ್ನು ಸಂಪುಟಕ್ಕೆ ಸೇರಿಸಲು ಮನಸ್ಸಿಲ್ಲ: ಕಾಂಗ್ರೆಸ್‌ಗೆ ಜೆಡಿಎಸ್ ಸಂದೇಶ | ಕೆಪಿಸಿಸಿ  ಅಧ್ಯಕ್ಷ ರಾಗಲು ಡಿಕೆಶಿಗೆ ವರಿಷ್ಠರ ಪ್ರಸ್ತಾಪ ಹೈಕಮಾಂಡ್ ಉಭಯ ನಾಯಕರಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಇರುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸಿದ್ದು, ಈ ಪೈಕಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಮಹತ್ವದ ಪಾತ್ರ ವಹಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವ ಪ್ರಸ್ತಾಪ ಮುಂದಿಟ್ಟಿದೆ ಎನ್ನಲಾಗಿದೆ. 

ಆದರೆ, ಲೋಕಸಭಾ ಚುನಾವಣೆ ಮುಗಿಯುವವರೆಗೂ ಈ ಹುದ್ದೆ ಪಡೆಯುವ ಮನಸ್ಸು ಹೊಂದಿಲ್ಲದ ಡಿ.ಕೆ.ಶಿವಕುಮಾರ್ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಕೆಪಿಸಿಸಿ ಹುದ್ದೆ ನೀಡು ವುದಾದರೆ ಅದರೊಂದಿಗೆ ಸಚಿವ ಸ್ಥಾನವನ್ನೂ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ರಚನೆ ವೇಳೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದ ಡಿ.ಕೆ. ಶಿವ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಿಕೆಗೆ ಜೆಡಿಎಸ್ ಮನಸ್ಸು ಮಾಡದಿರುವುದರ ಹಿಂದೆ ವರಿಷ್ಠ ಎಚ್.ಡಿ.ದೇವೇಗೌಡರು ಇದ್ದಾರೆ ಎನ್ನಲಾಗಿದೆ. 

ಆದರೆ, ಸರ್ಕಾರ ರಚನೆ ವೇಳೆ ಮಹತ್ವದ ಪಾತ್ರ ವಹಿಸಿದ ಶಿವಕುಮಾರ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ನಡುವೆ ಇತ್ತೀಚೆಗೆ ಉತ್ತಮ ಸಾಮರಸ್ಯ ನಿರ್ಮಾಣವಾಗಿದೆ ಎನ್ನಲಾಗಿದೆ. ಆದರೆ, ಕಾಂಗ್ರೆಸ್ ಪ್ರಭಾವಿ ಒಕ್ಕಲಿಗ ನಾಯಕನಾಗಿರುವ ಶಿವಕುಮಾರ್ ಅವರ ಬಗ್ಗೆ ದೇವೇಗೌಡರು ಮಾತ್ರ ಅಷ್ಟೇನೂ ಒಲವು ತೋರುತ್ತಿಲ್ಲ ಎನ್ನಲಾಗಿದೆ. 

ಇದು ಶಿವಕುಮಾರ್ ಅವರಿಗೆ ತೀವ್ರ ಅಸಮಾಧಾನ ಉಂಟಾಗಲು ಕಾರಣವಾಗಿದ್ದು, ಅವರು ತಮ್ಮ ಆಪ್ತರ ಬಳಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಎಂ.ಬಿ.ಪಾಟೀಲ್ ಅವರಿಗೂ ಹಲವು ಆಯಾಮಗಳಿಂದ ವಿರೋಧ ಬರುತ್ತಿದ್ದು, ಈಗ ಜೆಡಿಎಸ್ ನಾಯಕತ್ವ ಕೂಡ ಅವರಿಗೆ ಸಚಿವ ಸ್ಥಾನ ನೀಡಲು ಮನಸ್ಸು ಹೊಂದಿಲ್ಲ ಎಂಬ ಸಂದೇಶ ನೀಡಿ ರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಇನ್ನೊಂದೆಡೆ ಶಾಮನೂರು ಶಿವಶಂಕರಪ್ಪ ಬಣವು ಲಿಂಗಾಯತ -ವೀರಶೈವ ಒಡಕು ಉಂಟುಮಾಡಿದ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ನೀಡಬಾರದು ಎಂದು ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹಾಕಿದೆ. ಆದರೆ, ಎಂ.ಬಿ.ಪಾಟೀಲ್ ನೇರವಾಗಿ ಹೈಕಮಾಂಡ್ ಮಟ್ಟದಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

Follow Us:
Download App:
  • android
  • ios