ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಸಾಗರದಲ್ಲಿ  ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಹಿಂದಿಕ್ಕಿದ್ದಾರೆ. 

ಬೆಂಗಳೂರು : ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಸಾಗರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಹಿಂದಿಕ್ಕಿದ್ದಾರೆ. 

ಇನ್ನು ರಾಮನಗರದಲ್ಲಿ ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. 

ಹಾವೇರಿಯಲ್ಲಿ ಸಚಿವ ರುದ್ರಪ್ಪ ಲಮಾಣಿ ಮುನ್ನಡೆ ಸಾಧಿಸಿದ್ದಾರೆ. ಗದಗದಲ್ಲಿ ಎಚ್.ಕೆ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.