ಆನಂದ್ ಸಿಂಗ್ ಹುಡುಕಲು ಹೋಗಿ ಬರಿಗೈಲಿ ವಾಪಾಸ್ಸಾದ ಜಮೀರ್..!

Karnataka Assembly Election Anand Singh Missing Case New Twist
Highlights

ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ನಡೆ ನಿಗೂಢವಾಗಿದ್ದು, ಕಾಂಗ್ರೆಸ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಆನಂದ್ ಸಿಂಗ್ ಕಾಂಗ್ರೆಸ್’ಗೆ ’ಕೈ’ ಕೊಟ್ಟರಾ ಎಂಬ ಅನುಮಾನ ದಟ್ಟವಾಗತೊಡಗಿದೆ.

ಬೆಂಗಳೂರು[ಮೇ.16]: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಜಯನಗರ ಶಾಸಕ ಆನಂದ್ ಸಿಂಗ್ ಬರುತ್ತಾರೆ ಎಂಬ ನಿರೀಕ್ಷೆಯೊಂದಿಗೆ ಅವರನ್ನು ಹುಡುಕಿಕೊಂಡು ಹೋಗಿದ್ದ ಜಮೀರ್ ಅಹಮ್ಮದ್ ಖಾನ್ ಹಾಗೂ ನಾಗೇಂದ್ರ ಬರಿಗೈನಲ್ಲಿ ವಾಪಸಾಗಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಬದಲಾವಣೆಗಳಾಗುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಖಾಸಗಿ ರೆಸಾರ್ಟ್’ನಲ್ಲಿ ತಂಗಿದ್ದಾರೆ. ಆದರೆ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ನಡೆ ನಿಗೂಢವಾಗಿದ್ದು, ಕಾಂಗ್ರೆಸ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಆನಂದ್ ಸಿಂಗ್ ಕಾಂಗ್ರೆಸ್’ಗೆ ’ಕೈ’ ಕೊಟ್ಟರಾ ಎಂಬ ಅನುಮಾನ ದಟ್ಟವಾಗತೊಡಗಿದೆ.
15ನೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 78, ಜೆಡಿಎಸ್ 38 ಹಾಗೂ ಇತರರು 2 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹಾಗೂ ಪಕ್ಷೇತರರು ಸೇರಿ ಸರ್ಕಾರ ರಚಿಸಲು ಕಸರತ್ತು ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ ಆನಂದ್ ಸಿಂಗ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
 

loader