ಸಬ್ ಕಾ ವಿಕಾಸ್ ಅಲ್ಲ, ಸಬ್ ಕಾ ವಿನಾಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ವ್ಯಂಗ್ಯ ಮಾಡಿದ್ದಾರೆ.
ಬೆಳಗಾವಿ: ಸಬ್ ಕಾ ವಿಕಾಸ್ ಅಲ್ಲ, ಸಬ್ ಕಾ ವಿನಾಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ವ್ಯಂಗ್ಯ ಮಾಡಿದ್ದು ಹೀಗೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದಲ್ಲಿ, ಹುಕ್ಕೇರಿಗಳಲ್ಲಿ ಶನಿವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಮೊದಲು ಮೋದಿ ಹೇಳಿದಂತೆ ಸಬ್ ಕಾ ವಿಕಾಸ್ ಬದಲಾಗಿ ಸಬ್ ಕಾ ವಿನಾಶ್ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ದೂರಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ಹಾಗೂ ಅಮಿತ್ ಶಾ ಸುಳ್ಳು ಆರೋಪ ಮಾಡುತ್ತಿದ್ದು, ಯಾವುದೇ ದಾಖಲೆಗಳಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
