ಇಂದು ಸಂಜೆಯಿಂದ ನಿಷೇಧಾಜ್ಞೆ ಜಾರಿ

First Published 10, May 2018, 8:36 AM IST
Karnataka Election Code Of Cunduct
Highlights

ನಿರ್ಭೀತ ಚುನಾವಣೆಯಲ್ಲಿ ಗುರುವಾರ ಸಂಜೆಯಿಂದ ಬೆಂಗಳೂರಿನಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅದರಂತೆ ಮೇ 10 ರ ಸಂಜೆ ಆರು ಗಂಟೆಯಿಂದ ಮೇ 13 ರ ಸಂಜೆ ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ

ಬೆಂಗಳೂರು :  ನಿರ್ಭೀತ ಚುನಾವಣೆಯಲ್ಲಿ ಗುರುವಾರ ಸಂಜೆಯಿಂದ ಬೆಂಗಳೂರಿನಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅದರಂತೆ ಮೇ 10 ರ ಸಂಜೆ ಆರು ಗಂಟೆಯಿಂದ ಮೇ 13 ರ ಸಂಜೆ ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ನಿಷೇಧಾಜ್ಞೆಯ ಅವಧಿಯಲ್ಲಿ ಮೇ 12 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ, ಉಳಿದಂತೆ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆ, ರಾಜಕೀಯ ಪಕ್ಷ, ಧಾರ್ಮಿಕ ಸಂಸ್ಥೆಗಳು ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ. 

ಯಾವುದೇ ವ್ಯಕ್ತಿ ನಿಷೇಧಿಸಿದ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ಜಪ್ತಿ ಮಾಡಿ ಕ್ರಮ ಕೈಗೊಳ್ಳಲಾಗುವುದು. ಪ್ರಚೋದನಾಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.

loader