ಕರ್ನಾಟಕದಲ್ಲಿ ಕಮಲ ಅರಳುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಕಾರ್ಯಕರ್ತರು ಸಂಭ್ರಮಾಚಾರಣೆಯಲ್ಲಿ ತೊಡಗಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಯಡಿಯೂರಪ್ಪ ನಿವಾಸದತ್ತ ಆಗಮಿಸುತ್ತಿದ್ದಾರೆ. ಪೋಸ್ಟರ್ ಗಳನ್ನು ಹಿಡಿದುಕೊಂಡು ಬಿಎಸ್ ವೈ ಪರ ಘೋಷಣೆ ಕೂಗುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಕಮಲ ಅರಳುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಯಡಿಯೂರಪ್ಪ ನಿವಾಸದತ್ತ ಆಗಮಿಸುತ್ತಿದ್ದಾರೆ. ಪೋಸ್ಟರ್ ಗಳನ್ನು ಹಿಡಿದುಕೊಂಡು ಬಿಎಸ್ ವೈ ಪರ ಘೋಷಣೆ ಕೂಗುತ್ತಿದ್ದಾರೆ.
ಇದೇ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ಬಹುಮತದತ್ತ ಕಾಲಿಡುತ್ತಿದೆ ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರ ಆತ್ಮ ಚಡಪಡಿಸುತ್ತಿದೆ. ಕಾಂಗ್ರೆಸ್ ಮುಕ್ತ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರು ಬಿ.ಎಸ್.ವೈ ಅವರ ಅಪ್ಪನಾಣೆ ಸಿಎಂ ಆಗುವುದಿಲ್ಲ ಎಂದು ಹೇಳಿದ್ದರು. ಆದ್ರೆ ಈಗ ಅವರು ಸಿಎಂ ಆಗುವ ಸಮಯ ಬಂದಿದೆ. ನಾವೆಂದಿಗೂ ಕೂಡ ಧ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Last Updated 15, May 2018, 12:30 PM IST