ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. 

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. 

ಈ ನಿಟ್ಟಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ರಾಜಭವನದ ಮುಂದೆ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. 

ನಿನ್ನೆ ಶಾಂಗ್ರಿಲಾ ಹೋಟೆಲ್ ಗೆ ತೆರಳಿದ್ದ ಜೆಡಿಎಸ್ ಶಾಸಕರು ಅಲ್ಲಿಯೇ ಇದ್ದು, ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಮುಂದಿನ ತೀರ್ಮಾನಗಳ ಬಗ್ಗೆ ನಾಯಕರು ಚರ್ಚೆ ನಡೆಸಲಿದ್ದಾರೆ. 

ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.