ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಏ.27 ರಿಂದ ಕರ್ನಾಟಕ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ವಿವಿದೆಡೆ ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ಈ ಬಾರಿ ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.  ಕಳೆದ ಬಾರಿ ಕರ್ನಾಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಂಗಳೂರಿನ ಕುದ್ರೋಳಿ ದೇವಸ್ಥಾನ, ಶೃಂಗೇರಿ ಮಠಗಳಿಗೆ ಭೇಟಿ ನೀಡಿದ್ದರು. ಈ ಹಿಂದೆ ರೋಡ್ ಶೋಗಳ ಮೂಲಕ ಜನಮನ ಗೆದ್ದಿದ್ದ ರಾಹುಲ್ ಗಾಂಧಿ, ಈ ಬಾರಿ ಬಹುತೇಕವಾಗಿ ಹೆಲಿಕಾಪ್ಟರ್ ಮೂಲಕವೇ ಬೇರೆ ಬೇರೆ ಕಡೆ ಪಯಣಿಸುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗುತ್ತಿದೆ.

Comments 0
Add Comment