ಮುಳಬಾಗಿಲಿನಲ್ಲಿ ಗೆದ್ದಿರುವ ಎಚ್.ನಾಗೇಶ್ ಮೂಲತಃ ಕಾಂಗ್ರೆಸ್ ನಾಯಕರು, ಅವರನ್ನು ಈ ಚುನಾವಣೆಯಲ್ಲಿ ನಮ್ಮ ಪಕ್ಷ ಬೆಂಬಲಿಸಿದೆ. ಈಗ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಅತಿಮುಖ್ಯವಾಗಿರುವು ದರಿಂದ ತಮ್ಮೊಂದಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಎಚ್.ನಾಗೇಶ್ ಅವರನ್ನು ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಕೋಲಾರಕ್ಕೆ ಆಗಮಿಸಿ ತಮ್ಮೊಂದಿಗೆ ಕರೆದೊಯ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ, ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದರು.
ಮುಳಬಾಗಿಲಿನಲ್ಲಿ ಗೆದ್ದಿರುವ ಎಚ್.ನಾಗೇಶ್ ಮೂಲತಃ ಕಾಂಗ್ರೆಸ್ ನಾಯಕರು, ಅವರನ್ನು ಈ ಚುನಾವಣೆಯಲ್ಲಿ ನಮ್ಮ ಪಕ್ಷ ಬೆಂಬಲಿಸಿದೆ. ಈಗ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಅತಿಮುಖ್ಯವಾಗಿರುವು ದರಿಂದ ತಮ್ಮೊಂದಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
