ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲನೂರು ಲೇಪಾಕ್ಷಿ ಮಾಧ್ಯಮದವರ ಮುಂದೆ ತಮ್ಮ ಸಂಕಷ್ಟ ಹೇಳಿಕೊಂಡು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ.  

ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲನೂರು ಲೇಪಾಕ್ಷಿ ಮಾಧ್ಯಮದವರ ಮುಂದೆ ತಮ್ಮ ಸಂಕಷ್ಟ ಹೇಳಿಕೊಂಡು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. 

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಭಾವೋದ್ವೇಗ ಕ್ಕೊಳಗಾದ ಅವರು ಮೊದಲಿಂದ ಪಕ್ಷಕ್ಕಾಗಿ ಶ್ರಮಿಸಿದರೂ ನನಗೆ ಟಿಕೆಟ್ ನೀಡದಿರುವುದಕ್ಕೆ ತೀವ್ರ ಬೇಸರವಾಗಿದೆ ಎಂದು ಕಣ್ಣೀರು ಹಾಕಿದರು. 

ಕಳೆದ 7 ತಿಂಗಳ ಹಿಂದೆಯೇ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಹಾಲ ನೂರು ಲೇಪಾಕ್ಷಿ ಅವರನ್ನು ಬಿಜೆಪಿಯು ತನ್ನ ಅಭ್ಯರ್ಥಿ ಎಂದು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಚಾರ ಕೂಡ ಆರಂಭಿಸಿ ದ್ದರು. ಆದರೆ, ಕೊನೆಕ್ಷಣದಲ್ಲಿ ಹೆಬ್ಬಾಳದಿಂದ ಸೋತಿದ್ದ ರಾಯಣಸ್ವಾಮಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು.