ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂನಲ್ಲಿ ಇನ್ನೊಂದು ಅರ್ಜಿ

First Published 17, May 2018, 3:56 PM IST
Karnataka Politics Ram Jethmalani Moves SC Over CM Yeddyurappa
Highlights
  • ಬಿ.ಎಸ್‌. ಯಡಿಯೂರಪ್ಪಗೆ ಸರ್ಕಾರ ರಚಿಸಲು ಆಹ್ವಾನಿಸಿರುವ ಕರ್ನಾಟಕ ರಾಜ್ಯಪಾಲರ  ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ  

 

ನವದೆಹಲಿ ಮೇ.17: ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ ಹಿರಿಯ ವಕೀಲ, ಸಂವಿಧಾನ ತಜ್ಞ ರಾಮ್ ಜೇಠ್ಮಲಾನಿ ರಾಜ್ಯಪಾಲರ ನಿರ್ಧಾರದ ವಿರುದ್ಧ  ಸುಪ್ರೀಂ ಕೋರ್ಟಿನ ಕದ ತಟ್ಟಿದ್ದಾರೆ.

ತನ್ನ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ರಾಮ್ ಜೇಠ್ಮಲಾನಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಗುರುವಾರ ರಾಜಭವನದಲಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ನೀಡಿ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು, ಮಧ್ಯರಾತ್ರಿ ಸುಮಾರು ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣವಚನಕ್ಕೆ ತಡೆ ನೀಡಲು ನಿರಾಕರಿಸಿತ್ತು.  

ಕಾಂಗ್ರೆಸ್-ಜೆಡಿಎಸ್ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿರುವ ಸುಪ್ರೀಂ,  ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸುವಂತೆ ಬಿಎಸ್‌ವೈಗೆ ಸೂಚಿಸಿದೆ. 

 

loader