ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ ಎನ್ನುವ ವಿಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು :  ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ ಎನ್ನುವ ವಿಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮುಂದಿನ ಕೆಲವು ದಿನಗಳ ಕಾಲ ರಾಜ್ಯಾಧ್ಯಕ್ಷರಾಗಿ ಎಚ್​ಡಿಕೆ ಮುಂದುವರಿಯಲಿದ್ದಾರೆ ಎಂದಿದ್ದು, ಸದ್ಯಕ್ಕೆ ಯಾವುದೇ ಬದಲಾವಣೆಯನ್ನೂ ಮಾಡದಿರಲು ದೇವೇಗೌಡರು ನಿರ್ಧರಿಸಿದ್ದಾರೆ. ಸಿಎಂ ಸ್ಥಾನದ ಜೊತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ. 

 ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುವುದರಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿ ಹಿನ್ನೆಲೆ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಮ್ಮನ್ನು ಭೇಟಿಯಾದ ಕೆಲವು ಹಿರಿಯ ನಾಯಕರಿಗೆ ಸಮಜಾಯಿಸಿ ಕೊಟ್ಟಿದ್ದಾರೆ. 

ಅಲ್ಲದೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆತುರದ ನಿರ್ಧಾರವನ್ನು ಕೈಗೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.