ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ..?

Loksabha Election : JDS May Join Hand With Congress Again
Highlights

ಸದ್ಯ ಕರ್ನಾಟಕದಲ್ಲಿ ಒಂದಾಗಿ ಮೈತ್ರಿ ಸರ್ಕಾರ ರಚನೆ ಮಾಡುತ್ತಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿಯೂ ಒಂದಾಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸೂಚನೆ  ನೀಡಿದ್ದಾರೆ. 

 

ಬೆಂಗಳೂರು [ಮೇ 20] : ಸದ್ಯ ಕರ್ನಾಟಕದಲ್ಲಿ ಒಂದಾಗಿ ಮೈತ್ರಿ ಸರ್ಕಾರ ರಚನೆ ಮಾಡುತ್ತಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿಯೂ ಒಂದಾಗುವ ಸಾಧ್ಯತೆ ಇದೆ. 

ಈ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪ್ರತಿಕ್ರಿಯಿಸಿ ಒಂದಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ. 

ಜಾತ್ಯಾತೀತ ಪಕ್ಷಗಳು ಒಟ್ಟಾಗಿ ಹೋದರೆ ಒಳಿತು ಎನ್ನುವ ನಿಟ್ಟಿನಲ್ಲಿ ಒಂದಾಗುವ ಬಗ್ಗೆ ನಿರ್ಧಾರ ಮಾಡುತ್ತೇವೆ. ಸದ್ಯ ದೇಶದಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳನ್ನು ನಂಬುತ್ತಿಲ್ಲ.  ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್  ಸರ್ಕಾರ ರಚನೆ ಆಗಿರುವುದರಿಂದ  ಪ್ರಜಾಪ್ರಭುತ್ವಕ್ಕೆ ಒಳಿತಾಗಲಿದೆ ಎಂದು ಅವರು ಹೇಳಿದರು. 

ಇನ್ನು ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದರೂ ಕೂಡ ಜನ ಕಾಂಗ್ರೆಸ್ ಗೆ ಹೆಚ್ಚಿನ ಮತ ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್  ಹೆಚ್ಚಿನ ಸ್ಥಾನ ಪಡೆದುಕೊಳ್ಳುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

loader