ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಮುಂದಿನ ಮೇ 1 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಮುಂದಿನ ಮೇ 1 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.
ಈ ವೇಳೆ ಪ್ರಧಾನಿ ಅವರ ಉಡುಪಿಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದು, ಮಠಕ್ಕೂ ಕೂಡ ಭೇಟಿ ನೀಡಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಪರ್ಯಾಯ ಪಲಿಮಾರು ಹಾಗೂ ಪೇಜಾವರ ಶ್ರೀಗಳನ್ನು ಭೇಟಿ ಮಾಡಲಿದ್ದಾರೆ.
ಇನ್ನು ಅಂದು ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಬೃಹತ್ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 20 ಕ್ಷೇತ್ರಗಳಿಗೆ ಅನ್ವಯವಾಗುವಂತೆ ಅಂದು ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೇಳಿದ್ದಾರೆ.
