Asianet Suvarna News Asianet Suvarna News

ಹುಬ್ಬಳ್ಳಿ ಪಾಕ್‌ನಂತೆ ಕಾಣುತ್ತಿದೆ ಎಂದ ಮೌಲ್ವಿಯಿಂದ ಕಾಂಗ್ರೆಸ್ ಪರ ಪ್ರಚಾರ

May 8, 2018, 8:30 PM IST

ಹುಬ್ಬಳ್ಳಿ: ಹುಬ್ಬಳ್ಳಿ ಪಾಕಿಸ್ತಾನದಂತೆ ಕಾಣುತ್ತಿದೆ ಎಂದಿದ್ದ ಮೌಲ್ವಿ ಕಾಂಗ್ರೆಸ್ ಪರ ಪ್ರಚಾರ ಆರಂಭಿಸಿದ್ದಾರೆ. ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿ ಮನವಿ ಮಾಡುತ್ತಿದ್ದಾರೆ. ಗಣೇಶ ಪೇಟೆಯ ಮಸೀದಿಯಲ್ಲಿ ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ದೇಶದ್ರೋಹಿ ಹೇಳಿಕೆ ನೀಡಿದ್ದ ಈ ಮೌಲ್ವಿ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಹೇಳಿಕೆ ನೀಡಿ ಜೈಲು ಸೇರಿದ್ದರು. ಇದೀದ ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಅಬ್ಬಯ್ಯ ಪರ ಮತ ಯಾಚಿಸುತ್ತಿದ್ದಾರೆ. ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.