ಕೆ.ಎಚ್ ಮುನಿಯಪ್ಪ 2ನೇ ಮಗಳು ಚುನಾವಣಾ ಕಣಕ್ಕೆ

Muniyappa's second daughter Contest Election
Highlights

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮುಳಬಾಗಲು ಶಾಸಕ ಕೊತ್ತೂರು ಜಿ.ಮಂಜುನಾಥ್ ಮತ್ತು ಮುಳಬಾಗಲು ಮೀಸಲು ಕ್ಷೇತ್ರದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ದ್ವಿತೀಯ ಪುತ್ರಿ ನಂದಿನಿ ಮಂಗಳವಾರ ನಾಮಪತ್ರ ಸಲ್ಲಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ

ಕೋಲಾರ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮುಳಬಾಗಲು ಶಾಸಕ ಕೊತ್ತೂರು ಜಿ.ಮಂಜುನಾಥ್ ಮತ್ತು ಮುಳಬಾಗಲು ಮೀಸಲು ಕ್ಷೇತ್ರದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ದ್ವಿತೀಯ ಪುತ್ರಿ ನಂದಿನಿ ಮಂಗಳವಾರ ನಾಮಪತ್ರ ಸಲ್ಲಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಪ್ರಕರಣವೊಂದು ನ್ಯಾಯಾಲಯದಲ್ಲಿರುವುದೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.

ಮುಳಬಾಗಲು ಮೀಸಲು ಕ್ಷೇತ್ರದಲ್ಲಿ ಮಂಜುನಾಥ್ ಅವರು ಕೊತ್ತೂರು ಬುಡಗಜಂಗಮ ಸಮುದಾಯದ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು. ಇದನ್ನು ಆಕ್ಷೇಪಿಸಿ ಕ್ಷೇತ್ರದ ಪರಿಶಿಷ್ಟ ಜಾತಿಗೆ ಸೇರಿದ ಕೆಲವರು ಕೋರ್ಟ್ ಮೆಟ್ಟಿಲು ಹತ್ತಿದ್ದು ಬುಧವಾರ ತೀರ್ಪು ಬರುವ ಸಾಧ್ಯತೆ ಇದೆ. ಹೀಗಾಗಿ ಮುಳಬಾಗಲು ಕ್ಷೇತ್ರದಿಂದ ಮಂಜುನಾಥ್ ನಾಮಪತ್ರ ತಿರಸ್ಕೃತವಾದಲ್ಲಿ ಕ್ಷೇತ್ರ ಕೈ ತಪ್ಪಿ ಹೋಗಬಾರದು ಎಂಬ ಕಾರಣಕ್ಕೆ ನಂದಿನಿ ನಾಮಪತ್ರ ಸಲ್ಲಿಸಿದ್ದಾರೆ.

ಇದೇ ವೇಳೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಮೀರ್ ಪಾಷಾ ಅವರನ್ನು ಕಣದಿಂದ ನಿವೃತ್ತಿಗೊಳಿಸಿ ಮಂಜುನಾಥ್ ಅವರನ್ನು ಅಲ್ಲಿ ಗೆಲ್ಲಿಸಬಹುದೆಂಬುದು ಲೆಕ್ಕಾಚಾರ ಎನ್ನಲಾಗಿದೆ.

loader