ಚಿಕ್ಕೋಡಿಯಲ್ಲಿ ಜೈ ಮಹಾರಾಷ್ಟ್ರ ಎಂದರು ಗಡ್ಕರಿ

First Published 4, May 2018, 8:16 AM IST
Nithin Gadkari Says Jai Maharastra
Highlights

ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ಪರವಾಗಿ ಪ್ರಚಾರ ಕಾರ್ಯ ನಡೆಸುತ್ತಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮರಾಠಿಗರನ್ನು ಓಲೈಸಲು ಜೈ ಮಹಾರಾಷ್ಟ್ರ ಎಂದು ಹೇಳಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. 

ಚಿಕ್ಕೋಡಿ: ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ಪರವಾಗಿ ಪ್ರಚಾರ ಕಾರ್ಯ ನಡೆಸುತ್ತಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮರಾಠಿಗರನ್ನು ಓಲೈಸಲು ಜೈ ಮಹಾರಾಷ್ಟ್ರ ಎಂದು ಹೇಳಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಚಿಕ್ಕೋಡಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಬ ಜೊಲ್ಲೆ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಾರಂಭದಲ್ಲಿ ಜೈ ಮಹಾರಾಷ್ಟ್ರ ಎಂದು ಹೇಳಿದರು. 

ಮರಾಠಿಗರು ಹೆಚ್ಚು ಸಂಖ್ಯೆಯಲ್ಲಿರುವ ಪಟ್ಟಣದಲ್ಲಿ ಗಡ್ಕರಿಯವರು ಹೀಗೆ ಹೇಳಿರುವುದು ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ.

loader