ಆರ್‌ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮತ್ತೊಂದು ಎಫ್‌ಐಆರ್

One more FIR registered against RR Nagar Congress candidate Muniratna
Highlights

ಅಕ್ರಮ ಮತ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್‌ಆರ್ ನಗರದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಚುನಾವಣೆಗೆ ಇನ್ನು ಕೆಲವು ದಿನಗಳಿರುವಾಗಲೇ ಮತ ಬೇಟೆ ಬಿರುಸಿನಿಂದ ಸಾಗಿದೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೊಡೌನ್‌ವೊಂದರಲ್ಲಿ ಇಟ್ಟಿದ್ದು, ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುನಿರತ್ನ ಅವರು ಮತದಾರರಿಗೆ ಹಂಚಲು  ನಾಗರಭಾವಿಯ ಗೋಡೌನ್ ಒಂದರಲ್ಲಿ ಸೀರೆಗಳನ್ನು ಸಂಗ್ರಹಿಸಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದ ಚುನಾವಣಾ ವಿಚಕ್ಷಣ ದಳ 7 ಸಾವಿರಕ್ಕೂ ಹೆಚ್ಚು ಸೀರೆ ಹಾಗೂ ದವಸ ಧಾನ್ಯದ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಮುನಿರತ್ನ ಸೇರಿ ನಾಲ್ವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

ಆರ್‌ಆರ್‌ ನಗರ ವಿಧಾನಸಭಾ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸುಮಾರು 10 ಸಾವಿರ ಅಕ್ರಮ ಮತ ಚೀಟಿಗಳು ಪತ್ತೆಯಾದಹಿನ್ನೆಲೆಯಲ್ಲಿ, ಈ ಕ್ಷೇತ್ರದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. 

loader