ಮೌಢ್ಯಕ್ಕೆ ಜೋತು ಬಿದ್ರಾ ಪ್ರಧಾನಿ ? ಚಾಮರಾಜನಗರಕ್ಕೆ ಇಲ್ಲ ಮೋದಿ ಭೇಟಿ!

ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗಿಬಿಡುತ್ತೆ ಎಂಬ ಮೂಢನಂಬಿಕೆಗೆ ಜೋತು ಬಿದ್ದು ಮಾಜಿ ಸಿಎಂ ಯಡಿಯೂರಪ್ಪ, ಸದಾನಂದಗೌಡ ಅಲ್ಲಿಗೆ ಭೇಟಿ ನೀಡಿರಲಿಲ್ಲ. ಇದೀಗ ಚುನಾವಣಾ ಸಭೆಯನ್ನುದ್ದೇಶಿಸಲು ಪಕ್ಕದ ಸಂತೇಮಾರನಹಳ್ಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಚಾಮರಾಜನಗರಕ್ಕೆ ಭೇಟಿ ನೀಡುತ್ತಿಲ್ಲ. ಪ್ರಧಾನಿ ಮೋದಿ ಕೂಡಾ  ಮೌಢ್ಯಕ್ಕೆ ಜೋತು ಬಿದ್ದರೇ ಎಂಬ ಪ್ರಶ್ನೆಗಳು ಎದುರಾಗಿದೆ. ಮೋದಿಯನ್ನು ಚಾಮರಾಜನಗರ ಪಟ್ಟಣಕ್ಕೆ ಕರೆತರುವ ಪ್ರಯತ್ನವನ್ನೂ ಬಿಜೆಪಿ ನಾಯಕರು ಮಾಡುತ್ತಿಲ್ಲ. ಆದರೆ ಜನಾಶಿರ್ವಾದ ಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಒಟ್ಟು ಒಂಬತ್ತು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ.

Comments 0
Add Comment