ಪ್ರಧಾನಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಸ್ಎಂಕೆ

PM set to address rallies in Bengaluru today
Highlights

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದು, ಇಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದು, ಇಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾಗುವ ಮೊದಲು ನಗರದ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದ ಕೃಷ್ಣ ಅವರು ಭಾಷಣ ಮಾಡಿರಲಿಲ್ಲ.

 ಹೀಗಾಗಿ, ಗುರುವಾರದ ಸಮಾವೇಶದಲ್ಲಿ ಕೃಷ್ಣ ಅವರು ಮಾತನಾಡುವರೊ ಅಥವಾ ಮೌನಕ್ಕೆ ಶರಣಾಗುವರೊ ಎಂಬುದು ಕುತೂಹಲಕರವಾಗಿದೆ. ಈ ಸಮಾವೇಶ ಅಷ್ಟೇ ಅಲ್ಲದೆ, ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಕೆಲವು ಜಿಲ್ಲೆಗಳಲ್ಲಿ ಎರಡು ಅಥವಾ ಮೂರು ದಿನಗಳ ಕಾಲ ಪ್ರಚಾರ ಮಾಡುವಂತೆ ಬಿಜೆಪಿ ನಾಯಕರು ಕೃಷ್ಣ ಅವರಿಗೆ ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಕೃಷ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

loader