ರಾಜ್ಯ ಚುನಾವಣಾ ಅಖಾಡದಲ್ಲಿ ಕುರುಡು ಕಾಂಚಾಣದ ನರ್ತನ ಭಾರೀ ಸದ್ದು ಮಾಡುತ್ತಿದೆ. ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಎಲ್ಲೆಲ್ಲೂ ಹಣದ ಹೊಳೆಯೇ ಹರಿಯುತ್ತಿದೆ. 

ಕೋಲಾರ : ಚುನಾವಣೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಚುನಾವಣಾ ಅಖಾಡದಲ್ಲಿ ಕುರುಡು ಕಾಂಚಾಣದ ನರ್ತನ ಭಾರೀ ಸದ್ದು ಮಾಡುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಎಲ್ಲೆಲ್ಲೂ ಹಣದ ಹೊಳೆಯೇ ಹರಿಯುತ್ತಿದೆ. ಸಿಮೆಂಟ್ ಲಾರಿಯಲ್ಲಿ ಮೂಟೆಗಳ ಮಧ್ಯೆ ಚೀಲದಲ್ಲಿ 500 ಮತ್ತು 2 ಸಾವಿರ ರೂಪಾಯಿ ಮುಖಬೆಲಯ ಒಟ್ಟು 70 ಲಕ್ಷ ಹಣ ಪತ್ತೆಯಾಗಿದೆ. 

ಮುಳಬಾಗಲಿನಿಂದ ಬೆಂಗಳೂರಿನತ್ತ ಹೊರಟಿದ್ದ ಸಿಮೆಂಟ್ ಲಾರಿಯಲ್ಲಿ, ಅಕ್ರಮ ಹಣ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಜಿಲ್ಲಾಧಿಕಾರಿ ಸತ್ಯವತಿ ಕೋಲಾರದ ಕೊಂಡರಾಜಹಳ್ಳಿಯಲ್ಲಿ ಲಾರಿಯನ್ನು ವಶಕ್ಕೆ ಪಡೆದು ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.