ಮತ್ತೆ ಜೆಡಿಎಸ್’ಗೆ ಪೂಜಾ ಗಾಂಧಿ

Pooja Gandhi to join JDS
Highlights

ಜೆಡಿಎಸ್‌ನಿಂದ ರಾಜಕೀಯ ಆರಂಭಿಸಿ, ಕಳೆದ ಚುನಾವಣೆಯಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದಲ್ಲಿದ್ದ ಚಿತ್ರನಟಿ ಪೂಜಾ ಗಾಂಧಿ ಇದೀಗ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು: ಜೆಡಿಎಸ್‌ನಿಂದ ರಾಜಕೀಯ ಆರಂಭಿಸಿ, ಕಳೆದ ಚುನಾವಣೆಯಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದಲ್ಲಿದ್ದ ಚಿತ್ರನಟಿ ಪೂಜಾ ಗಾಂಧಿ ಇದೀಗ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರಲಿದ್ದಾರೆ.

ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಪೂಜಾ ಗಾಂಧಿ ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಹೀನಾಯವಾಗಿ ಸೋಲು ಅನುಭವಿಸಿದ್ದರು. ನಂತರದ ದಿನಗಳಲ್ಲಿ ಅವರು ರಾಜಕೀಯದಿಂದ ದೂರವಾಗಿದ್ದರು. ಅದಕ್ಕೂ ಮುನ್ನ 2012 ರಲ್ಲಿ ಅವರು ಜೆಡಿಎಸ್ ಸೇರ್ಪಡೆಯಾಗಿದ್ದರು. ನಂತರ ಬಿಎಸ್‌ಆರ್ ಕಾಂಗ್ರೆಸ್‌ಗೆ ಹೋಗಿದ್ದರು.

loader