ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಯಾದ ಪುಟ್ಟರಾಜು ಸಂಸದ ಸ್ಥಾನವನ್ನು ತ್ಯಜಿಸಿದ್ದಾರೆ.
ಮಂಡ್ಯ: ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಯಾದ ಪುಟ್ಟರಾಜು ಸಂಸದ ಸ್ಥಾನವನ್ನು ತ್ಯಜಿಸಿದ್ದಾರೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಕಾರಣ ಜೆಡಿಎಸ್‌ನ ಸಿ.ಎಸ್. ಪುಟ್ಟರಾಜು, ತಮ್ಮ ಸಂಸದ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು.
2014 ರಲ್ಲಿನಡೆದ ಲೋಕಸಭಾ ಚುನಾವಣೆ ವೇಳೆ ಪುಟ್ಟರಾಜು, ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 6 ತಿಂಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ.
ಕೆಲ ದಿನಗಳ ಹಿಂದಷ್ಟೇ ಸಂಸದ ಸ್ಥಾನಗಳಿಗೆ ಬಿಜೆಪಿ ಮುಖಂಡರಾದ ಬಿ.ಎಸ್ ಯಡಿಯೂರಪ್ಪ ಹಾಗೂ ಶ್ರೀ ರಾಮುಲು ಅವರು ರಾಜೀನಾಮೆ ನೀಡಿದ್ದರು.
