ನೂತನ ವಿಧಾನಸಭೆಯ ಸ್ವೀಕರ್‌ ಆಯ್ಕೆಗೆ ಸಂಬಂಧಿಸಿದಂತೆ ಶುಕ್ರವಾರ ಚುನಾವಣೆ ನಡೆಯಲಿದ್ದು, ನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚಿಸಲಿದ್ದಾರೆ. 

ಬೆಂಗಳೂರು : ನೂತನ ವಿಧಾನಸಭೆಯ ಸ್ವೀಕರ್‌ ಆಯ್ಕೆಗೆ ಸಂಬಂಧಿಸಿದಂತೆ ಶುಕ್ರವಾರ ಚುನಾವಣೆ ನಡೆಯಲಿದ್ದು, ನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚಿಸಲಿದ್ದಾರೆ.

ಈ ಸಂಬಂಧ ಗುರುವಾರ ಮಧ್ಯಾಹ್ನ 12 ಗಂಟೆಯೊಳಗಾಗಿ ಯಾವುದೇ ಒಬ್ಬ ಸದಸ್ಯರು ಇನ್ನೊಬ್ಬ ಸದಸ್ಯರನ್ನು ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂಬ ಒಂದು ಪ್ರಸ್ತಾವದ ಸೂಚನಾ ಪತ್ರವನ್ನು ಸಲ್ಲಿಸಬಹುದು ಎಂದು ವಿಧಾನಸಭೆಯ ಕಾರ್ಯದರ್ಶಿ ಎಸ್‌.ಮೂರ್ತಿ ತಿಳಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ಸಿನ ಹಿರಿಯ ಶಾಸಕ ಹಾಗೂ ಮಾಜಿ ಸ್ಪೀಕರ್‌ ಆಗಿಯೂ ಕಾರ್ಯನಿರ್ವಹಿಸಿದ್ದ ಕೆ.ಆರ್‌. ರಮೇಶ್‌ಕುಮಾರ್‌ ಅವರು ನೂತನ ಸ್ಪೀಕರ್‌ ಆಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತವಾಗಿದೆ.