Asianet Suvarna News Asianet Suvarna News

ಬಿಜೆಪಿ ವಿರುದ್ಧ ಇಸಿಗೆ ದೂರಿದ ಆರ್‌ಆರ್ ನಗರ ಕೈ ಅಭ್ಯರ್ಥಿ ಮುನಿರತ್ನ

ಅಕ್ರಮ ಮತ ಚೀಟಿ ಪತ್ತೆಯಾದ ಹಿನ್ನೆಲೆಯಲ್ಲಿ ಆರ್‌ಆರ್‌ ನಗರ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುಖ್ಯ ಚುನಾವಣಾ ಅಧಿಕಾರಿಗೆ ಈ ಅಕ್ರಮದಲ್ಲಿ ಬಿಜೆಪಿ ಪಾತ್ರವಿದೆ ಎಂದು ಆರೋಪಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ.

RR Nagar Congress candidate meets Chief election officer

ಬೆಂಗಳೂರು: ಅಕ್ರಮ ಮತ ಚೀಟಿ ಪತ್ತೆಯಾದ ಹಿನ್ನೆಲೆಯಲ್ಲಿ ಆರ್‌ಆರ್‌ ನಗರ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುಖ್ಯ ಚುನಾವಣಾ ಅಧಿಕಾರಿಗೆ ಈ ಅಕ್ರಮದಲ್ಲಿ ಬಿಜೆಪಿ ಪಾತ್ರವಿದೆ ಎಂದು ಆರೋಪಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಸಂಸದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಯೋಗಕ್ಕೆ ತೆರಳಿದ ಮುನಿರತ್ನ, ಸಿಇಒ ಸಂಜೀವ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. 

ಕಣ್ಣೀರಿಟ್ಟ ಮುನಿರತ್ನ

'ಅಕ್ರಮ ಮತಚೀಟಿ ಪ್ರಕರಣದ ಹಿಂದೆ ಬಿಜೆಪಿ ಕೈವಾಡವಿದೆ. 

ಜೆಡಿಎಸ್ ಆಗುತ್ತಾ ಕಿಂಗ್, ಸಿದ್ದರಾಮಯ್ಯ ಅವರೇನು ಮಾಡ್ತಾರೆ?

ಚುನಾವಣಾ ಆಯೋಗದ ಮೇಲೆ ಕೇಂದ್ರ ಸರಕಾರದ ಒತ್ತಡವಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ವಜಾಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ತಮ್ಮ ಬಳಿ ಇದ್ದ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದೆಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ,' ಎಂದು ಮುನಿರತ್ನ ತಿಳಿಸಿದ್ದಾರೆ.

ಆರ್‌ಆರ್ ನಗರ ವಿಧಾನಸಭಾ ವ್ಯಪ್ತಿಯಲ್ಲಿರುವ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸುಮಾರು 10 ಸಾವಿರ ಅಕ್ರಮ ಮತ ಚೀಟಿಗಳು ಪತ್ತೆಯಾಗಿವೆ. ಇವನ್ನು ಸೂಕ್ತರಿಗೆ ತಲುಪಿಸಿದ ನಂತರ ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದ್ದು, ಮೇ 28ರಂದು ಮತದಾನ ನಡೆಯಲಿದೆ.

ಚುನಾವಣೆ ಸಮೀಕ್ಷೆಗಳೇ ಅತಂತ್ರ

ಮೇ 12ರಂದು 222 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಆರ್‌ಆರ್ ನಗರಕ್ಕೆ ಮೇ 28ರಂದು ಚುನಾವಣೆ ನಡೆದರೆ, ಬಿಜೆಪಿ ಅಭ್ಯರ್ಥಿ ಸಾವಿನಿಂದ ಮತದಾನ ಪ್ರಕ್ರಿಯೆ ಸ್ಥಗಿತಗೊಂಡ ಜಯನಗರದ ಚುನಾವಣೆಗಿನ್ನೂ ದಿನಾಂಕ ನಿಗದಿಯಾಗಿಲ್ಲ.

ಮತದಾನ ಹೆಚ್ಚು ಹೊಸಕೋಟೆಯಲ್ಲಿ
 

Follow Us:
Download App:
  • android
  • ios