ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Section 144 impose in Dakshina Kannada District
Highlights

ಸರ್ಕಾರ ರಚನೆ ಪ್ರಕ್ರಿಯೆ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಇಂದಿನಿಂದ ಮೇ.22 ರ ಬೆಳಗ್ಗೆ 10 ಗಂಟೆವರೆಗೂ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸಂಥಿಲ್ ಹೊರಡಿಸಿದ್ದಾರೆ. 

ಮಂಗಳೂರು (ಮೇ.20):  ಸರ್ಕಾರ ರಚನೆ ಪ್ರಕ್ರಿಯೆ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಇಂದಿನಿಂದ ಮೇ.22 ರ ಬೆಳಗ್ಗೆ 10 ಗಂಟೆವರೆಗೂ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸಂಥಿಲ್ ಹೊರಡಿಸಿದ್ದಾರೆ. 

ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.  ನಿನ್ನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ಸಂಭವಿಸಿತ್ತು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೊರಡಿಸಲಾಗಿದೆ. 

 ಬಿಜೆಪಿ ಭದ್ರ ಕೋಟೆಯಾಗಿರುವ ದಕ್ಷಿಣ ಕನ್ನಡ ಭಾಗದಲ್ಲಿ ಈ ಬಾರಿ ಒಟ್ಟು 8 ಸ್ಥಾನಗಳಲ್ಲಿ 7 ಸ್ಥಾನಗಳನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದೆ. ಇಂಟರೆಸ್ಟಿಂಗ್ ವಿಚಾರ ಎಂದರೆ 2013 ರ ಚುನಾವಣೆಯಲ್ಲಿ ಕಾಂಗ್ರೆಸ್ 7 ಸ್ಥಾನಗಳನ್ನು ಪಡೆದು ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಆದರೆ ಈ ಬಾರಿ ಚುನಾವಣೆಯಲ್ಲಿ ಲೆಕ್ಕಾಚಾರ ತಲೆಕೆಳಗಾಗಿದೆ. ಬಹುಮತಕ್ಕೆ ಕೇವಲ 8 ಸ್ಥಾನಗಳಿಂದ ವಂಚಿತರಾಗಿ ಬಿಎಸ್ ವೈ ರಾಜಿನಾಮೆ ಕೊಡಬೇಕಾಯಿತು. ಇದರಿಂದ ಬಿಜೆಪಿ ಪಾಳಯದಲ್ಲಿ, ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ.  

loader