ತುಮಕೂರು : ಜಿಲ್ಲೆಯ ಮಧುಗಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಎಂ.ಆರ್‌. ಹುಲಿನಾಯ್ಕರ್‌ರಂತೆ ಈಗ ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಕೆ.ಮಂಜುನಾಥ್‌ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ತಾವು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟಾ್ರಧ್ಯಕ್ಷರು ಹಾಗೂ ರಾಜ್ಯ ನಾಯಕರು ನನ್ನನ್ನು ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಅಲ್ಲದೆ, ಏ.18 ರಂದು ಬಿ ಫಾರಂ ತೆಗೆದುಕೊಂಡು ಹೋಗುವಂತೆ ಕಚೇರಿಯಿಂದ ಮಾಹಿತಿಯೂ ಬಂದಿತ್ತು. ಅದರಂತೆ ಪಕ್ಷದ ಕಚೇರಿಗೆ ಬಂದಾಗ ಯಾವುದೇ ಪ್ರತಿಕ್ರಿಯೆ ಕೊಡಲಿಲ್ಲ.

ಕೊನೆಗೆ ನಾನು ಕಾರ್ಯಕರ್ತರು ಹಾಗೂ ಕುಟುಂಬ ಸದಸ್ಯರ ಅಭಿಪ್ರಾಯದ ಮೇರೆಗೆ ಚುನಾವಣೆಗೆ ನಿಲ್ಲದಿರಲು ತೀರ್ಮಾನಿಸಿದ್ದೇನೆ ಎಂದು ಮಂಜುನಾಥ್‌ ಪತ್ರದಲ್ಲಿ ತಿಳಿಸಿದ್ದಾರೆ.